VA Recruitment – ಕೆಇಎಯಿಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 22. ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತಹ 1000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಕೆಇಎ ಅಧಿಸೂಚನೆ ಹೊರಡಿಸಿದೆ.


ಅರ್ಹ ಅಭ್ಯರ್ಥಿಗಳು ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕಾಗಿದೆ.

ಹುದ್ದೆಗಳ ವಿವರ – 1000 ಹುದ್ದೆಗಳು
ವೇತನ ಶ್ರೇಣಿ – ರೂ. 21,400 ರಿಂದ 42,000/
ಶೈಕ್ಷಣಿಕ ವಿದ್ಯಾರ್ಹತೆ – ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ
ಪಿಂಚಣಿ ಸೌಲಭ್ಯ – NPS
ವಯೋಮಿತಿ– ಸಾಮಾನ್ಯ ವರ್ಗದವರಿಗೆ 35 ವರ್ಷಗಳು. ಪ್ರವರ್ಗ 2ಎ, 2ಬಿ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

Also Read  ಹೂಡಿಕೆಯ ಹೊರತಾಗಿಯೂ ರಾಜ್ಯದಲ್ಲಿ ಕುಸಿಯುತ್ತಿರುವ ಪ್ರವಾಸೋದ್ಯಮ!

ಅರ್ಜಿ ಸಲ್ಲಿಸುವ ವಿಧಾನ– ಕೆಇಎಯ ಅಧಿಕೃತ ಜಾಲತಾಣ https://kea.kar.nic.in ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ದಿನಾಂಕ 04-03-2024ರಿಂದ ಆರಂಭಗೊಳ್ಳಲಿದ್ದು, ಕೊನೆಯ ದಿನಾಂಕ 03-04-2024 ಆಗಿರುತ್ತದೆ. ಶುಲ್ಕ ಪಾವತಿಸಲು ಕೊನೆಯ ದಿನಾಂಕ 06-04-2024.

ಅರ್ಜಿ ಶುಲ್ಕ– ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗ ಅಂದರೆ ಪ್ರವರ್ಗ -2ಎ, 2ಬಿ, 3ಎ, 3ಬಿ ಅವರಿಗೆ ರೂ.750. ಎಸ್ಸಿ, ಎಸ್ಟಿ, ಪ್ರವರ್ಗ-1, ಮಾಜಿ ಸೈನಿಕರು ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ ರೂ.500.

ಆಯ್ಕೆ ವಿಧಾನ– ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್ ಲೈನ್ ಒಎಂಆರ್ ಮಾದರಿ ಮೂಲಕ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ತೆಗೆದಂತಹ ಅಂಕಗಳ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.

Also Read  ಚಿಕ್ಕಮಗಳೂರು ಭಾರೀ ಮಳೆ - ಪ್ರವಾಸ ಮುಂದೂಡುವಂತೆ ಸೂಚನೆ

error: Content is protected !!
Scroll to Top