(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 22. ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿವೆಯೇ ಎಂಬುವುದರ ಬಗ್ಗೆ ಸಮೀಕ್ಷೆ ನಡೆಸಲು ಸ್ವಯಂ ಸೇವಕರ ತಂಡ ರಚನೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯರ್ತೆಯರು ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಗಳನ್ನು ಗ್ಯಾರಂಟಿ ಸ್ವಯಂ ಸೇವಕರೆಂದು ಗುರುತಿಸಿ ಅವರನ್ನು ಮನೆ ಮನೆಗೆ ಕಳುಹಿಸಿ ಮುಂದಿನ 10ರಿಂದ 15 ದಿನಗಳಲ್ಲಿ ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. ಈ ಸಮೀಕ್ಷೆಗೆ ಒಬ್ಬರಿಗೆ ಒಂದು ಬಾರಿಗೆ ಸೀಮಿತಗೊಳಿಸಿ 1000 ರೂ. ಹೆಚ್ಚುವರಿ ಪ್ರೋತ್ಸಾಹಧನ ಕೂಡಾ ಸರ್ಕಾರ ನೀಡಲಿದೆ.