ಮುಖ್ಯಮಂತ್ರಿಗಳ “ರೈತ ವಿದ್ಯಾನಿಧಿ”- ಆದಾಯ ಪ್ರಮಾಣ ಪತ್ರ ಅಪ್ಲೋಡ್ ಮಾಡಲು ಫೆ. 29 ಕೊನೆಯ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಮುಖ್ಯಮಂತ್ರಿಗಳ “ರೈತ ವಿದ್ಯಾನಿಧಿ” ಕಾರ್ಯಕ್ರಮದಡಿ ಪ್ರಗತಿ ಸಾಧಿಸಲು ಅನುಕೂಲವಾಗುವಂತೆ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಆದಾಯ ಪ್ರಮಾಣ ಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ (SSP) ಲಾಗಿನ್ ನಲ್ಲಿ ಅಪ್ಲೋಡ್ ಮಾಡಲು ಫೆಬ್ರವರಿ 29 ಕೊನೆಯ ದಿನವಾಗಿದೆ.

2023-24ನೇ ಸಾಲಿನಲ್ಲಿ ಇತರೆ ಇಲಾಖೆಗಳ (ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಇತರ ಇಲಾಖೆಗಳು) ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳ “ರೈತ ವಿದ್ಯಾನಿಧಿ” ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಅನರ್ಹರಾಗಿರುತ್ತಾರೆ. ಸದರಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯ ರೂ. 2.50 ಲಕ್ಷ ಮೀರಿರಬಾರದು. ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಿ, ಎಸ್‍ಎಸ್‍ಪಿ ಸಂತ್ರಾಂಶದಲ್ಲಿ ಅಪ್ಲೋಡ್ ಮಾಡುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top