ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ- ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ವೃತ್ತಿಪರ ಮತ್ತು ಸ್ನಾತಕೋತರ ಗುರುತಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಎಸ್‍.ಎಸ್‍.ಎಚ್‍.ಪಿ ಲಾಗಿನ್ ನಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಫೆಬ್ರವರಿ 29ರವರೆಗೆ ತಾಲೂಕು ಕಲ್ಯಾಣ ಅಧಿಕಾರಿಗಳ ಎಸ್.ಎಚ್.ಪಿ ಲಾಗಿನ್ ನಲ್ಲಿ ಪ್ರವೇಶಾತಿ ಕಲ್ಪಿಸಲಾಗಿದೆ. ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಉಳಿದಿರುವ ಸ್ಥಾನಗಳಿಗೆ ತಾಲೂಕು ಹಂತದಲ್ಲಿ ವಿದ್ಯಾರ್ಥಿಗಳಿಂದ ದಾಖಲಾತಿಗಳನ್ನು ಪಡೆದು ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ದಾಖಲೆಗಳನ್ನು ಸಂಬಂಧಪಟ್ಟ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಅಕ್ರಮ ಮರ ಸಾಗಾಟ ಆರೋಪ: 4 ಮಂದಿ ಅರೆಸ್ಟ್

error: Content is protected !!
Scroll to Top