ಮಹಿಳೆಯರಿಬ್ಬರಿಂದ ಮಗು ಅಪಹರಣಕ್ಕೆ ಯತ್ನ..!

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಫೆ. 23. ಮನೆಗೆ ಬಂದ ಇಬ್ಬರು ಅಪರಿಚಿತರು ಮಹಿಳೆಯರು ಮನೆಯಲ್ಲಿದ್ದ 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ಬ್ರಹ್ಮಾವರದ ಉಪ್ಪಿನಕೋಟೆ ಎಂಬಲ್ಲಿ ನಡೆದಿದೆ.

ಉಪ್ಪಿನಕೋಟೆಯ ಮಹಿಮಾ ಎಂಬವರ ಮನೆಗೆ ಬಂದ ಇಬ್ಬರು ಅಪರಿಚಿತ ಹೆಂಗಸರು ತಾವು ಬಾಂಬೆಯಿಂದ ಬಂದಿರುವುದಾಗಿ ತಿಳಿಸಿದ್ದಲ್ಲದೇ, ಮನೆಯೊಳಗೆ ಹೋಗಿ ಮಹಿಮಾ ಅವರ 1 ವರ್ಷದ ಹೆಣ್ಣು ಮಗುವನ್ನು ಎತ್ತಿಕೊಂಡು ಮೊಬೈಲಿನಲ್ಲಿರುವ ವಿಡಿಯೋಗಳನ್ನು ತೋರಿಸುತ್ತಾ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಕೂಡಲೇ ಮಹಿಮಾ ಅವರು ತನ್ನ ಮಗುವನ್ನು ಕರೆದುಕೊಂಡು ಬಂದಿದ್ದು, ಅಷ್ಟರಲ್ಲಿ ಅಲ್ಲಿಗೆ ಮಹಿಮಾ ಅವರ ಅಣ್ಣ ಬಂದಿದ್ದನ್ನು ನೋಡಿದ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ➤ ನಿರ್ಮಾಣ ಹಂತದಲ್ಲಿರುವ ಕಟ್ಟಡದ 42ನೇ ಮಹಡಿಯಿಂದ ಕಲ್ಲು ಬಿದ್ದು, ಇಬ್ಬರು ಸಾವು!

error: Content is protected !!
Scroll to Top