ಅಕ್ರಮ ಹಣ ಸಾಗಾಟ-14.26 ಲಕ್ಷ ರೂಪಾಯಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೀದರ್, ಫೆ. 23.  ಗೂಡ್ಸ್ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 14.26 ಲಕ್ಷ ರೂಪಾಯಿ ನಗದು ಸಹಿತ ವಾಹನವನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೀದರ್ ನ ಹುಲಸೂರು ತಾಲೂಕಿನ ಅಂಬೇವಾಡಿ ಚೆಕ್ ಪೋಸ್ಟ್ ಬಳಿ ನಡೆದಿದೆ.

ಲೋಕಸಭೆ ಚುನಾವಣೆ ಸುಮೀಪಿಸುತ್ತಿರುವುದರಿಂದ ಹುಲಸೂರು ತಾಲೂಕಿನ ಅಂಬೇವಾಡಿ ಚೆಕ್ ಪೋಸ್ಟ್ ಬಳಿ ಪೊಲೀಸರು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬಸವಕಲ್ಯಾಣದಿಂದ ಮಹಾರಾಷ್ಟ್ರದ ಲಾತೂರ್ ಗೆ ತೆರಳುತ್ತಿದ್ದ ಈಚರ್ ಗೂಡ್ಸ್ ವಾಹನವನ್ನು ತಪಾಸಣೆ ನಡೆಸಿದಾಗ 5.26 ಲಕ್ಷ ರೂ. ಮೌಲ್ಯದ ವಿಮಲ್ ಪಾನ್ ಮಸಾಲಾ ಮತ್ತು ತಂಬಾಕು ಇದರ ಜೊತೆಗೆ 14.26 ಲಕ್ಷ ನಗದನ್ನು ಪತ್ತೆ ಹಚ್ಚಿದ ಪೊಲೀಸರು ವಾಹನ ಸೇರಿ ಒಟ್ಟು 31 ಲಕ್ಷ 53 ಸಾವಿರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಸೆಪ್ಟೆಂಬರ್ 4ರಂದು ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ವಿಚಾರಗೋಷ್ಟಿ

error: Content is protected !!
Scroll to Top