ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಶಾಸಕ ಅಶೋಕ್ ರೈ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಅನಿವಾಸಿ ಭಾರತೀಯರ ಜೀವನ ಭದ್ರತೆಯ ಜೊತೆಗೆ ಅವರಿಗೆ ಮತದಾನಕ್ಕೆ ಅವಕಾಶ ಮಾಡಿಕೊಡಲು ಹೊಸ ನಿಯಮ ರೂಪಿಸುವಂತೆ ಶಾಸಕ ಅಶೋಕ್‌ ಕುಮಾರ್‌ ರೈ ವಿಧಾನಸಭೆಯಲ್ಲಿ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

 

ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ. 7ರಷ್ಟು ಮಂದಿ ಪಾಸ್‌ ಪೋರ್ಟ್ ಹೊಂದಿದ್ದು, 1.03 ಕೋಟಿ ಮಂದಿ ಉದ್ಯೋಗ ನಿಮಿತ್ತ ವಿವಿಧ ದೇಶಗಳಲ್ಲಿದ್ದಾರೆ. ಅವರು 60ರಿಂದ 70 ವಯಸ್ಸಿನಲ್ಲಿ ಸ್ವದೇಶಕ್ಕೆ ಮರಳುತ್ತಾರೆ. ಅವರ ಜೀವನಕ್ಕೆ ಭದ್ರತೆಯನ್ನು ಕಲ್ಪಿಸಬೇಕಾಗಿದ್ದು, ಇದಕ್ಕಾಗಿ ಸರಕಾರ ಹೊಸ ನಿಯಮ ರೂಪಿಸಬೇಕು ಎಂದು ಆಗ್ರಹಿಸಿದರು. ಅನಿವಾಸಿ ಭಾರತೀಯರು ಮತದಾನದಿಂದ ವಂಚಿತರಾಗುತ್ತಿದ್ದು, ಸರಕಾರ ಮತದಾನಕ್ಕೆ ಅವಕಾಶ ಮಾಡಿಕೊಡಬೇಕು ಎಂದೂ ಅವರು ಆಗ್ರಹಿಸಿದರು.

Also Read  ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ.!!

error: Content is protected !!
Scroll to Top