ಮೊಬೈಲ್ ಚಾರ್ಜಿಂಗ್ ಪ್ಲಗ್ ತೆಗೆಯುವಾಗ ವಿದ್ಯುತ್ ಶಾಕ್ ► ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ಫೆ.13. ಮೊಬೈಲ್ ಚಾರ್ಜಿಂಗ್‌ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಸ್ಪರ್ಶವಾಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೃತ ಯುವಕನನ್ನು ಶ್ರೀರಂಗಪಟ್ಟಣದ ತಾಲೂಕಿನ ಬಸವಪುರ ನಿವಾಸಿ ಸಾಗರ್ (20) ಎಂದು ಗುರುತಿಸಲಾಗಿದೆ. ಗೂಡ್ಸ್ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ ಸಾಗರ್ ಇಂದು ಬಾಡಿಗೆಗಾಗಿ ಬಂದಿದ್ದ ವೇಳೆ ಮೊಬೈಲ್ ಚಾರ್ಜ್ ಇಲ್ಲದ ಕಾರಣ ಮೈಸೂರು-ಬನ್ನೂರು ರಸ್ತೆಯಲ್ಲಿರುವ ದೇವೇಗೌಡ ವೃತ್ತದ ಸಮೀಪವಿರುವ ಸಿಮೆಂಟ್ ಅಂಗಡಿಯಲ್ಲಿ ಚಾರ್ಜಿಗೆ ಇಟ್ಟಿದ್ದ ಎನ್ನಲಾಗಿದೆ. ಬಾಡಿಗೆಗೆ ಹೋಗಲು ಅಣಿಯಾದ ಈತ ಮೊಬೈಲ್ ಚಾರ್ಜರ್ ತೆಗೆಯಲು ಮುಂದಾಗುತ್ತಿದ್ದಂತೆ ಪ್ಲಗ್‍ನಿಂದ ಕರೆಂಟ್ ಪಾಸ್ ಆಗಿ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾನೆ. ತಕ್ಷಣ ಅಂಗಡಿಯವರು ಕೆ.ಆರ್. ಆಸ್ಪತ್ರೆಗೆ ದಾಖಲು ಮಾಡಿದ್ದರಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top