ದಯಾಮರಣ ಕೋರಿ ರಾಷ್ಟ್ರಪತಿ ಹಾಗೂ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪೊಲೀಸ್ ಸಿಬ್ಬಂದಿ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 24. ಕಳೆದ ಮೂರು ವರ್ಷಗಳಿಂದ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯದಲ್ಲಿದ್ದ ದಂಪತಿಗೆ ಯಾವುದೇ ಅಂತರ್​ ಜಿಲ್ಲಾ ವರ್ಗಾವಣೆಯಾಗದೇ ಇದ್ದು, ಹಾಗಾಗಿ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೆಂದು ಪೊಲೀಸ್​ ಸಿಬ್ಬಂದಿಯೋರ್ವರು ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

 

ಸುಪ್ರೀಂಕೋರ್ಟ್ ಆದೇಶ ಮತ್ತು ಕೆಸಿಎಸ್‌ಆರ್ ನಿಯಮದ ಪ್ರಕಾರ, ಪತಿ-ಪತ್ನಿ ಯಾರು ಇರುತ್ತಾರೆ ಅವರು ಒಂದೇ ಘಟಕ ಹಾಗೂ ಒಂದೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಲು ನಿಯಮ ಇದೆ. ಆದರೆ, ದಂಪತಿಗಳಿಬ್ಬರು ಕರ್ನಾಟಕದ ಪೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ದಂಪತಿ ಕರ್ತವ್ಯ ನಿರ್ವಹಿಸುತ್ತಿದ್ದು, ಯಾವುದೇ ಅಂತರ್ ಜಿಲ್ಲಾ ವರ್ಗಾವಣೆಯಾಗಿಲ್ಲ. ಆದರೆ ಕಳೆದ 3 ವರ್ಷಗಳಿಂದ ಕರ್ನಾಟಕ ಸರ್ಕಾರವಾಗಲೀ, ರಾಜ್ಯ ಗೃಹ ಸಚಿವರಾಗಲೀ, ಪೊಲೀಸ್​ ಮುಖ್ಯಸ್ಥರಾಗಲೀ ಯಾವುದೆ ವರ್ಗಾವಣೆ ಮಾಡುತ್ತಿಲ್ಲ. ಈ ವಿಚಾರವಾಗಿ ಸುಮಾರು 3 ವರ್ಷಗಳಿಂದ ಮಾನ್ಯ ಗೃಹ ಸಚಿವರಿಗೆ ಪತಿ-ಪತ್ನಿ ಪ್ರಕರಣದಲ್ಲಿ ಅಂತರ್ ಜಿಲ್ಲಾ ವಗಾವಣೆ ಮಾಡುವಂತೆ ಆನೇಕ ಬಾರಿ ಮನವಿ ಸಲ್ಲಿಸಿದ್ದು, ಈ ವಿಚಾರವಾಗಿ ಶೀಘ್ರದಲ್ಲೇ ವರ್ಗಾವಣೆ ಮಾಡುತ್ತೇವೆ ಅಂತ ಮಾಧ್ಯಮಗಳ ಮುಂದೆ 3 ವರ್ಷಗಳಿಂದ ಹೇಳಿಕೆ ನೀಡಿರುತ್ತಾರೆ ವಿನಹ ಯಾವುದೇ ವರ್ಗಾವಣೆ ಮಾಡಿಲ್ಲ. ನಾವು 10 ರಿಂದ 15 ವರ್ಷಗಳ ಕಾಲ ತಂದೆ ತಾಯಿ ಹೆಂಡತಿ ಮಕ್ಕಳನ್ನು ಬಿಟ್ಟು, ನಾವು ಒಂದು ಕಡೆ, ಹೆಂಡತಿ ಒಂದು ಕಡೆ ಇರಬೇಕು. ಅದರಿಂದ ಅನೇಕ ಸಮಸ್ಯೆಗಳು ಎದುರಾಗುತ್ತಿದ್ದು, ನಮಗೆ ನೆಮ್ಮದಿ ಅನ್ನೋದು ಹಾಳಾಗಿ ಆರೋಗ್ಯದಲ್ಲಿ ತೊಂದರೆ ಉಂಟಾಗಿವೆ. ಆದ ಕಾರಣ ದಯಾಳುಗಳಾದ ತಾವುಗಳು ನಮಗೆ ಸಾಮೂಹಿಕ ಮರಣ ಪಡೆಯಲು ದಯಾಮಾಡಿ ದಯಾಮರಣ ಕಲ್ಪಿಸಿಕೊಡಬೇಕು ಎಂದು ಪೊಲೀಸ್​ ಸಿಬ್ಬಂದಿಯೋರ್ವರು ಪತ್ರ ಬರೆದಿದ್ದಾರೆ.

Also Read  ಒಂದನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ➤ ಕೇಂದ್ರ ಶಿಕ್ಷಣ ಸಚಿವಾಲಯ ಎಲ್ಲಾ ರಾಜ್ಯಗಳಿಗೆ ನಿರ್ದೇಶನ

error: Content is protected !!
Scroll to Top