ಮುಂಬೈಯಲ್ಲಿ ರಸ್ತೆ ಅಪಘಾತ – ಕಾಸರಗೋಡು ಕಯ್ಯಾರ್ ನಿವಾಸಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಫೆ. 24. ಮುಂಬೈಯಲ್ಲಿ ನಡೆದ ಅಪಘಾತದಲ್ಲಿ ಕಾಸರಗೋಡು ಮೂಲದ ಕಯ್ಯಾರ್ ನಿವಾಸಿಯೋರ್ವರು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಕಯ್ಯಾರ್ ಚನ್ನಿಕುಡೇಲ್ ನ ರೂಬನ್ ಚಾರ್ಲ್ಸ್ ಕ್ರಾಸ್ತ (39) ಎಂದು ಗುರುತಿಸಲಾಗಿದೆ. ಮುಂಬೈನಲ್ಲಿ ಉದ್ಯಮ ನಡೆಸುತ್ತಿದ್ದ ಇವರು, ಶುಕ್ರವಾರದಂದು ಸಂಜೆ ಬೈಕ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ರೂಬನ್ ನನ್ನು ಸಮೀಪದ ಆಸ್ಪತ್ರೆಗೆ ತಲಪಿಸಿದರೂ ಅದಾಗಲೇ ಮೃತಪಟ್ಟಿದ್ದಾರೆ.

Scroll to Top