ಸಿವಿಲ್ ನ್ಯಾಯಾಧೀಶೆಯಾಗಿ ಕಡಬದ ಗೀತಾ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಕರ್ನಾಟಕ ಸಿವಿಲ್ ನ್ಯಾಯಾಧೀಶರ 2023ನೆ ಸಾಲಿನ ಪರೀಕ್ಷೆಯಲ್ಲಿ ತುಮಕೂರು ಮೂಲದ ಗೀತಾ ಡಿ. ಉತ್ತೀರ್ಣರಾಗಿದ್ದು, ಸಿವಿಲ್ ನ್ಯಾಯಧೀಶರಾಗಿ ಕಾರ್ಯನಿರ್ವಹಿಸಲಿದ್ದಾರೆ.

 

ಮೂಲತಃ ತುಮಕೂರಿನವರಾದ ಗೀತಾ ಅವರು ಪ್ರಸಕ್ತ ಕಡಬ ಸಮೀಪದ ಚಾರ್ವಾಕದಲ್ಲಿ ಪತಿಯೊಂದಿಗೆ ನೆಲೆಸಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಮತ್ತು ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಶಿಕ್ಷಣ ಪಡೆದ ಇವರು 2023ರ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಮೂಲಕ ಕರಾವಳಿಗೆ ಕೀರ್ತಿ ತಂದಿದ್ದಾರೆ.

Also Read  ಮಠ, ದೇಗುಲಗಳನ್ನು ನಿಯಂತ್ರಿಸುವ ಯಾವುದೇ ಉದ್ದೇಶ ಸರಕಾರಕ್ಕಿಲ್ಲ ► ವಿಧಾನ ಪರಿಷತ್ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

error: Content is protected !!
Scroll to Top