ಟಿಕೆಟ್ ರಹಿತ ಪ್ರಯಾಣ – 7.83 ಲಕ್ಷ ರೂ. ದಂಡ ವಸೂಲಿ ಮಾಡಿದ BMTC

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 24. ಬಿಎಂಟಿಸಿ ಬಸ್‌ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ 2024ರ ಜನವರಿಯಲ್ಲಿ ಒಟ್ಟು ರೂ.7,83,570 ದಂಡ ವಸೂಲಿ ಮಾಡಲಾಗಿದೆ ಎಂದು ಸಾರಿಗೆ ಸಂಸ್ಥೆ ಮಾಹಿತಿ ನೀಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಟಿಸಿ, ಸಂಸ್ಥೆಯ ಆದಾಯ ಸೋರಿಕೆ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತನಿಖಾ ತಂಡವು ನಗರದಾದ್ಯಂತ ಸಂಚರಿಸುವ ವಾಹನಗಳನ್ನು ತಪಾಸಣೆ ನಡೆಸಿವೆ ಎಂದು ಹೇಳಿದೆ. ಈ ಪೈಕಿ ಜನವರಿಯಲ್ಲಿ ಒಟ್ಟು 17,967 ಟ್ರಿಪ್‌ ಗಳನ್ನು ತಪಾಸಣೆ ನಡೆಸಿ, 3,696 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಲಾಗಿದೆ. ಅವರಿಂದ ಒಟ್ಟು ರೂ.7,35,870 ದಂಡ ವಸೂಲಿ ಮಾಡಲಾಗಿದೆ. ಸಂಸ್ಥೆಯ ನಿರ್ವಾಹಕರ ವಿರುದ್ಧ 1177 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದೆ. ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 477 ಪುರುಷ ಪ್ರಯಾಣಿಕರಿಂದ ಒಟ್ಟು ರೂ.47,700 ಅನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ. ಡಿಸೆಂಬರ್‌ ತಿಂಗಳಿನಲ್ಲಿ 4173 ಪ್ರಯಾಣಿಕರಿಂದ ಒಟ್ಟು ರೂ.7,83,570 ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

Also Read  ಮದ್ಯಪ್ರಿಯರಿಗೆ ಗುಡ್ ನ್ಯೂಸ್ ➤ ಮೇ.04 ರಿಂದ ಮದ್ಯ ಮಾರಾಟಕ್ಕೆ ಗ್ರೀನ್‌ ಸಿಗ್ನಲ್

error: Content is protected !!
Scroll to Top