ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗೂಡ್ಸ್ ಗಾಡಿ ಢಿಕ್ಕಿ- ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ, ಫೆ. 24. ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ವೇಗವಾಗಿ ಬಂದ ಗೂಡ್ಸ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಹಂಗಳೂರು ಗ್ರಾಮದ ಶಬರಿ ಹೊಟೇಲ್ ಎದುರಿನ ರಾ.ಹೆದ್ದಾರಿ 66ರಲ್ಲಿ ಸಂಭವಿಸಿದೆ.


ಮೃತರನ್ನು ಅನಂತಯ್ಯ (68) ಎಂದು ಗುರುತಿಸಲಾಗಿದೆ. ಅವರು ಮನೆಗೆ ತೆರಳುವುದಕ್ಕಾಗಿ ರಸ್ತೆ ದಾಟಲು ನಿಂತಿದ್ದ ವೇಳೆ ಕುಂದಾಪುರ ಕಡೆಯಿಂದ ವೇಗವಾಗಿ ಬಂದ ಗೂಡ್ಸ್ ವಾಹನ ಢಿಕ್ಕಿ ಹೊಡೆದಿತ್ತು. ಪರಿಣಾಮ ರಸ್ತೆಗೆ ಬಿದ್ದ ಅನಂತಯ್ಯರವರ ತಲೆ ಹಾಗೂ ಸೊಂಟಕ್ಕೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮೊದಲು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top