ಮಿಸ್ ವರ್ಲ್ಡ್ 2024- ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ ಸಿನಿ ಶೆಟ್ಟಿ ಆಯ್ಕೆ..!

(ನ್ಯೂಸ್ ಕಡಬ) neskadaba.com ಉಡುಪಿ, ಫೆ. 26. ಮಾರ್ಚ್ 9 ರಂದು ನಡೆಯಲಿರುವ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿರುವ 71ನೇ ಆವೃತ್ತಿಯ ಮಿಸ್ ವರ್ಲ್ಡ್ 2024 ರಲ್ಲಿ ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ 21 ವರ್ಷದ ಸಿನಿ ಶೆಟ್ಟಿ ಆಯ್ಕೆಯಾಗಿದ್ದಾರೆ.

ಮುಂಬೈನಲ್ಲಿ ನಡೆದ ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್-2022’ ಕಾರ್ಯಕ್ರಮದಲ್ಲಿ ಸಿನಿ ಶೆಟ್ಟಿ ‘ಮಿಸ್ ಇಂಡಿಯಾ’ ಕಿರೀಟವನ್ನು ಅಲಂಕರಿಸಿದ ನಂತರ ಈ ಘೋಷಣೆ ಹೊರ ಬಿದ್ದಿದೆ. ಅಕೌಂಟಿಂಗ್ ಮತ್ತು ಫೈನಾನ್ಸ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಶೆಟ್ಟಿ, ಭರತನಾಟ್ಯದಲ್ಲೂ ಪ್ರವೀಣರು. 71ನೇ ವಿಶ್ವ ಸುಂದರಿ ಸ್ಪರ್ಧೆಗೆ ಖ್ಯಾತ ಫ್ಯಾಷನ್ ಡಿಸೈನರ್ ಅರ್ಚನಾ ಕೊಚ್ಚರ್ ಅಧಿಕೃತ ಫ್ಯಾಷನ್ ಡಿಸೈನರ್ ಆಗಿ ನೇಮಕಗೊಂಡಿದ್ದಾರೆ. ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತದ ಶ್ರೀಮಂತ ಇತಿಹಾಸವನ್ನು ಎತ್ತಿ ತೋರಿಸುತ್ತಾ, ಈ ಪ್ರತಿಷ್ಠಿತ ಕಾರ್ಯಕ್ರಮದ ಭಾಗವಾಗಿರುವುದಕ್ಕೆ ಸಿನಿ ಶೆಟ್ಟಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

Also Read  ವಿಶೇಷ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಯ ಲಿಖಿತ ಪರೀಕ್ಷಾ ದಿನಾಂಕ ಪ್ರಕಟ

error: Content is protected !!
Scroll to Top