(ನ್ಯೂಸ್ ಕಡಬ) neskadaba.com ಉಡುಪಿ, ಫೆ. 26. ದ್ವಿಚಕ್ರ ವಾಹನ ಅಪಘಾತಗೊಂಡು ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಶಾರದಾ ಹೋಟೆಲ್ ಹತ್ತಿರದ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಗಾಯಾಳುವನ್ನು ಕನ್ನರ್ಪಾಡಿಯ ಸೋಮನಾಥ್ ಶೆಟ್ಟಿ ಎಂದು ಗುರುತಿಸಲಾಗಿದೆ. ಹಿಂಬದಿಯಲ್ಲಿ ಕುಳಿತ ಸಹಸವಾರನಿಗೂ ಸಣ್ಣ ಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಈ ಕುರಿತು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದ್ವಿಚಕ್ರ ವಾಹನ ಅಪಘಾತ – ಸವಾರ ಗಂಭೀರ
