ಕೋಡಿಂಬಾಳ ರೈಲು ನಿಲ್ದಾಣ ಅಭಿವೃಧ್ದಿ ಪಡಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 27. ತಾಲೂಕು ಕೇಂದ್ರ ಕಡಬದ ಸಮೀಪವಿರುವ ಕೋಡಿಂಬಾಳ ರೈಲು ನಿಲ್ದಾಣದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಡಬ ತಾಲೂಕು ಕೋಡಿಂಬಾಳ ರೈಲ್ವೇ ನಿಲ್ದಾಣ ಅಭಿವೃಧ್ಧಿ ಹೋರಾಟ ಸಮಿತಿ ವತಿಯಿಂದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಯಿತು.

ಸೋಮವಾರದಂದು ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿ ವತಿಯಿಂದ ಅಧಿಕಾರಿಗಳ ಮೂಲಕ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕೋಡಿಂಬಾಳದ ರೈಲು ನಿಲ್ದಾಣಕ್ಕೆ ಮೂಲ ಸೌಕರ್ಯಗಳನ್ನು ಒದಗಿಸಿ ಸಮಗ್ರ ಅಭಿವೃದ್ಧಿಪಡಿಸುವಂತೆ, ಎಕ್ಸ್ ಪ್ರೆಸ್ ರೈಲುಗಳಿಗೆ ನಿಲುಗಡೆ ಮಾಡುವಂತೆ ದಿನದ ಮೂರು ಹೊತ್ತು ಸುಬ್ರಹ್ಮಣ್ಯ ರೋಡ್-ಮಂಗಳೂರು ನಡುವೆ ಪ್ಯಾಸೆಂಜರ್ ರೈಲು ಓಡಾಟ ಮರು ಆರಂಭಿಸುವಂತೆ  ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಲಾಯಿತು. ಹೋರಾಟ ಸಮಿತಿ ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್, ಸಂಚಾಲಕ ಫಝಲ್ ಕೋಡಿಂಬಾಳ ಮತ್ತಿತರರು ಉಪಸ್ಥಿತರಿದ್ದರು.

Also Read  'PUC'  ವಿಜ್ಞಾನ, ವಾಣಿಜ್ಯ ಪಠ್ಯದಲ್ಲಿ ಕಡಿತ!   ➤ಶಿಕ್ಷಣ ಇಲಾಖೆ ಸ್ಪಷ್ಟನೆ

error: Content is protected !!
Scroll to Top