ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ ಮೈಸೂರು ಸಂಸದ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 27. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ತನ್ನ ವಿರುದ್ಧ ಅವಹೇಳನಕಾರಿ ಪದ ಬಳಸಿದ್ದಾರೆ ಎಂದು ಆರೋಪಿಸಿ ಮೈಸೂರು ಸಂಸದ ಪ್ರತಾಪ್ ಸಿಂಹ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸುವಂತೆ ಖಾಸಗಿ ದೂರು ಸಲ್ಲಿಸಿದ್ದಾರೆ.

ಪ್ರತಾಪ್ ಸಿಂಹ ಒಬ್ಬ ದೊಡ್ಡ ಅಯೋಗ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬಾಯಿ ಮುಚ್ಕಂಡು ಸುಮ್ಮನಿದ್ದರೆ ಸರಿ. ಇಲ್ಲವಾದಲ್ಲಿ ಇಡೀ ಕಾಂಗ್ರೆಸ್ ಪಾಳಯ ಮೈಸೂರಿಗೆ ಇಳಿಯಬೇಕಾಗುತ್ತೆ ಎಂದು ಏಕವಚನದಲ್ಲಿ ಮಾತನಾಡಿದ್ದಾರೆ ಎಂಬುದಾಗಿ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

Also Read  ಪಣಂಬೂರ್ ಬೀಚ್ ಕಿಕ್ಕಿರಿದ ಪ್ರವಾಸಿಗರು ➤ಒಂದೇ ದಿನ 20 ಸಾವಿರಕ್ಕೂ ಹೆಚ್ಚಿನ ಮಂದಿ..!

 

error: Content is protected !!
Scroll to Top