ಪಾಕ್ ನ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ನವಾಬ್ ಷರೀಫ್ ಪುತ್ರಿ ಆಯ್ಕೆ

(ನ್ಯೂಸ್ ಕಡಬ) newskadaba.com ಲಾಹೋರ್, ಫೆ. 27. ಪಾಕಿಸ್ತಾನದ ಮಾಜಿ ಪ್ರಧಾನಿ ನವಾಬ್ ಷರೀಫ್ ಅವರ ಪುತ್ರಿ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ನಾಯಕಿಯಾಗಿರುವ ಮರ್ಯಮ್ ನವಾಜ್ ಅವರು ಪಾಕ್ ನ ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಈ ಮೂಲಕ ಮರ್ಯಮ್ ಅವರು 12 ಕೋಟಿ ಜನಸಂಖ್ಯೆ ಹೊಂದಿರುವ ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಸಿಎಂ ಆಗಿದ್ದಾರೆ. 2012ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ ಮರ್ಯಮ್ ಅವರು, 2013ರ ಸಾರ್ವತ್ರಿಕ ಚುನಾವಣೆಯ ವೇಳೆ ಚುನಾವಣಾ ಪ್ರಚಾರದ ಉಸ್ತುವಾರಿ ವಹಿಸಿದ್ದರು.

error: Content is protected !!
Scroll to Top