ಪೊಲೀಸ್ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಅನುಮತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 27. ಪೊಲೀಸ್​ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ವರದಿಯಾಗಿದೆ.

ಪತಿ-ಪತ್ನಿ ಪ್ರಕರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ವರ್ಗಾವಣೆಗೆ ಗೃಹಸಚಿವ ಪರಮೇಶ್ವರ್​ ಡಿಜಿ ಮತ್ತು ಐಜಿಪಿ ಅಲೋಕ್‌ ಮೋಹನ್‌ ಗೆ ಸೂಚಿಸಿದ್ದರು. ಇನ್ನು ಅರ್ಹ ಪತಿ-ಪತ್ನಿ ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಹಲವು ತಿಂಗಳಿಂದ ಪತಿ-ಪತ್ನಿ ಪೊಲೀಸರ ವರ್ಗಾವಣೆಗೆ ಆಗ್ರಹ ಕೇಳಿ ಬಂದಿದ್ದು, ಈ ಕುರಿತಾಗಿ ಪೊಲೀಸ್ ಸಿಬ್ಬಂದಿಯೊಬ್ಬರು ಸರ್ಕಾರಕ್ಕೆ ದಯಾಮರಣ ಕೋರಿ ಅರ್ಜಿ ಸಲ್ಲಿಸಿದ್ದರು.

Also Read  ದಿನಗೂಲಿ ನೌಕರರ ಮೇಲೆ ದೌರ್ಜನ್ಯ, ಮುನಿರತ್ನ ಮೇಲೆ ಮತ್ತೊಂದು ಎಫ್‌ಐಆರ್

error: Content is protected !!
Scroll to Top