ಪೈಂಟಿಂಗ್ ಮಾಡುತ್ತಿದ್ದ ವೇಳೆ ಜಾರಿ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಮನೆಯ ಕಟ್ಟಡದ ಎರಡನೇ ಮಹಡಿಯಲ್ಲಿ ಪೈಂಟಿಂಗ್ ಕೊಡುತ್ತಿದ್ದ ಯುವಕ ಏಣಿಯ ಜೊತೆಯಲ್ಲೇ ಆಯತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಶಕ್ತಿನಗರದಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಕುಡುಪು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಎಂದು ಗುರುತಿಸಲಾಗಿದೆ. ಮೋಹಿತ್ ಪೂಜಾರಿ ಅವರು ಮಂಗಳೂರಿನ ಮನೆಯೊಂದರಲ್ಲಿ 15 ದಿನಗಳಿಂದ ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಏಣಿ ಜಾರಿದ ಪರಿಣಾಮ ಮೋಹಿತ್ ಹೊರಭಾಗದ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದಾರೆ.

Also Read  ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಡಿ. 25 ರಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯ

error: Content is protected !!
Scroll to Top