ರೈಲ್ವೇ ಇಲಾಖೆಯಲ್ಲಿ ವಿವಿಧ 4660 ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 27. ಭಾರತೀಯ ರೈಲ್ವೇ ಇಲಾಖೆಯು ತನ್ನಲ್ಲಿರುವ ವಿವಿಧ ಖಾಲಿ ಹುದ್ದೆಗಳ ನೇಮಕಾತಿಗಾಗಿ ಮತ್ತೊಂದು ಅಧಿಸೂಚನೆ ಹೊರಡಿಸಿದ್ದು, ಈ ಮೂಲಕ ವರ್ಷದಲ್ಲಿ ಮೂರನೇ ಅಧಿಸೂಚನೆ ಹೊರಡಿಸಿರುವ ಇಲಾಖೆ ಖಾಲಿ ಹುದ್ದೆಗಳ ಭರ್ತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಭಾರತೀಯ ರೈಲ್ವೇ ಇಲಾಖೆ ವ್ಯಾಪ್ತಿಯಲ್ಲಿ ರೈಲ್ವೆ ರಕ್ಷಣಾ ಸಿಬ್ಬಂದಿ ಪಡೆಯ ರೈಲ್ವೆ ಸಬ್‌ಇನ್ಸ್‌ಪೆಕ್ಟರ್, ರೈಲ್ವೆ ಕಾನ್ಸ್‌ಟೇಬಲ್‌ ಸೇರಿ ಒಟ್ಟು 4660 ಖಾಲಿ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳು ಈ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ನೇಮಕಾತಿಯ ಸಂಪೂರ್ಣ ವಿವರ ಇಲ್ಲಿದೆ.

ನೇಮಕಾತಿ ವಿವರ
ಸಂಸ್ಥೆ ಹೆಸರು- ಭಾರತೀಯ ರೈಲ್ವೇ
ಹುದ್ದೆ ಹೆಸರು: ಆರ್‌ಪಿಎಫ್‌ ಸಬ್‌ ಇನ್ಸ್‌ಪೆಕ್ಟರ್, ಆರ್‌ಪಿಎಸ್‌ ಕಾನ್ಸ್‌ಟೇಬಲ್‌
ಮಾಸಿಕ ವೇತನ: 21700 ರಿಂದ 35,400 ರೂಪಾಯಿ
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಏಪ್ರಿಲ್ 14
ಪೋಸ್ಟಿಂಗ್- ದೇಶದ ರೈಲ್ವೇ ಇಲಾಖೆ ವ್ಯಾಪ್ತಿಯಲ್ಲಿ ಎಲ್ಲಿಯಾದರೂ
ವಿದ್ಯಾರ್ಹತೆ- ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗೆ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿರಬೇಕು. ಕಾನ್ಸ್‌ಟೇಬಲ್‌ ಹುದ್ದೆಗೆ ಅಭ್ಯರ್ಥಿಗಳು ಅಂಗೀಕೃತ ಶಿಕ್ಷಣ ಸಂಸ್ಥೆಗಳಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆ ಉತ್ತೀರ್ಣಗೊಳಿಸಿರಬೇಕು ವಯೋಮಿತಿ- ಸಬ್‌ಇನ್ಸ್‌ಪೆಕ್ಟರ್ ಹುದ್ದೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮುಂದಿನ ಜುಲೈ 01ಕ್ಕೆ 20-28 ವರ್ಷವಾಗಿರಬೇಕು. ಉಳಿದಂತೆ ಕಾನ್ಸ್‌ಟೇಬಲ್‌ ಹುದ್ದೆಯ ಅಭ್ಯರ್ಥಿಗಳಿಗೆ ಅದೇ ದಿನಾಂಕಕ್ಕೆ 18-28 ವರ್ಷ ವಯಸ್ಸಾಗಿರಬೇಕು.
ಅರ್ಜಿ ಶುಲ್ಕ- ಸಾಮಾನ್ಯ ಅಭ್ಯರ್ಥಿಗಳು, ಒಬಿಸಿ ಅಭ್ಯರ್ಥಿಗಳಿಗೆ ಶುಲ್ಕ: 500 ರೂ.
ಎಸ್‌ಸಿ, ಎಸ್‌ಟಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ: 250 ರೂ.

Also Read  ಬಂಟ್ವಾಳ ಹೋಮ್ ಕ್ವಾರಂಟೈನ್ ನಿಯಮ ಮೀರಿದಾತನ ವಿರುದ್ಧ ಪ್ರಕರಣ ದಾಖಲು

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಲಿಂಕ್‌ ಅನ್ನು 2024ರ ಏಪ್ರಿಲ್ 15 ರಂದು ಆಯಾ ರೈಲ್ವೇ ವಲಯಗಳ ಪ್ರಾದೇಶಿಕ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಅಧಿಸೂಚನೆಯನ್ನು ಲಿಂಕ್ ಗೆ ಭೇಟಿ www.rrbbnc.gov.in ಗೆ ನೀಡಿ ಪಡೆದುಕೊಳ್ಳಬೇಕು. ಅರ್ಹ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೇ ಆನ್‌ಲೈನ್ ಮೂಲಕ ಸೂಕ್ತ ದಾಖಲೆಗಳ ಸಮೇತ ಅರ್ಜಿ ಹಾಕಬೇಕು ಎಂದು ರೈಲ್ವೆ ಇಲಾಖೆ ತಿಳಿಸಿದೆ.

Also Read  ಜಲಜೀವನ್ ಮಿಷನ್ ಯೋಜನೆ ➤ ಈ ವರ್ಷ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ

ಪ್ರಮುಖ ದಿನಾಂಕಗಳು

ಆನ್‌ಲೈನ್‌ ಅಪ್ಲಿಕೇಶನ್‌ ಸ್ವೀಕಾರ ಆರಂಭಿಕ ದಿನಾಂಕ : 15-04-2024
ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಲು ಕೊನೆ ದಿನಾಂಕ : 14-05-2024

error: Content is protected !!
Scroll to Top