(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಹಯೋಗದೊಂದಿಗೆ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವು ಮಾರ್ಚ್ 12ರಂದು ಬೆಳಿಗ್ಗೆ 8ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಾಂಸ್ಕೃತಿಕ ಸ್ಪರ್ಧೆಗಳು ಮಾರ್ಚ್ 13ರಂದು ಬೆಳಿಗ್ಗೆ 9 ಗಂಟೆಗೆ ಸರಕಾರಿ ನೌಕರರ ಸಭಾಭವನದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರ್ಚ್ 12ರಿಂದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ
