ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ನೊಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ಮಾರ್ಚ್ 01ರಿಂದ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ನೊಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ಮುಂಬರುವ ಚುನಾವಣಾ ಸಂಬಂಧ ಕೇಂದ್ರ ಕಛೇರಿಯ ಮಂಜೂರಾತಿಯಂತೆ ಮಾರ್ಚ್ 01ರಿಂದ ಮಾ. 10 ರವರೆಗೆ ಜಿಲ್ಲಾ ಗೃಹರಕ್ಷಕ ದಳ ಕಛೇರಿ, ಮೇರಿಹಿಲ್ ನಲ್ಲಿ ಮೂಲ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

10 ದಿನಗಳ ಅವಧಿಯಲ್ಲಿ ನಡೆಯುವ ತರಬೇತಿಯಲ್ಲಿ 55 ಗೃಹರಕ್ಷಕರಿಗೆ ವಿವಿಧ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಿಂದ ರೈಫಲ್ ತರಬೇತಿ, ಅಗ್ನಿಶಮನ ತರಬೇತಿ, ಪ್ರಥಮ ಚಿಕಿತ್ಸೆ ತರಬೇತಿ, ಲಾಠಿ ಡ್ರಿಲ್, ನಿಸ್ತಂತು ತರಬೇತಿ, ವಿಪತ್ತು ನಿಯಂತ್ರಣ ತರಬೇತಿ, ಸಂಚಾರ ನಿಯಂತ್ರಣ ಮುಂತಾದ ತರಬೇತಿಗಳನ್ನು ನೀಡಲಾಗುವುದು. ಮಾ. 01ರಂದು ಮಧ್ಯಾಹ್ನ  12:00 ಗಂಟೆಗೆ ತರಬೇತಿ ಶಿಬಿರದ ಉದ್ಘಾಟನೆಯನ್ನು ಪೊಲೀಸ್ ಉಪ ಆಯುಕ್ತರಾದ ಶ್ರೀ ಬಿ.ಪಿ. ದಿನೇಶ್ ಕುಮಾರ್ ಅವರು ಮಾಡಲಿದ್ದಾರೆ. ಈ ತರಬೇತಿಯು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ| ಮುರಲೀ ಮೋಹನ್ ಚೂಂತಾರು ಇವರ ನೇತೃತ್ವದಲ್ಲಿ ನಡೆಯಲಿದೆ ಎಂದು ಗೃಹರಕ್ಷಕದಳದ  ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Also Read  ರಾಜ್ಯಮಟ್ಟದ ಅಂಚೆ ಚೀಟಿ ಪ್ರದರ್ಶನ - KARNAPEX 2019

error: Content is protected !!
Scroll to Top