(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಘಟಕ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 1ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ಪ್ರಯುಕ್ತ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು/ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ರೀತಿಯ ಸ್ಪೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಮಾಹಿತಿಯನ್ನು ರವಾನಿಸುವ ಅಥವಾ ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿμÉೀಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ನಿಷೇಧಿಸಲಾಗಿದೆ.