ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡಲು ಪ್ರೇರೇಪಿಸಿ- ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಾರ್ಚ್ 3 ರಂದು ಎಲ್ಲಾ 0-5 ವರ್ಷದ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ 0-5 ವರ್ಷದ ಮಕ್ಕಳು ಲಸಿಕೆ ಪಡೆಯುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳಲ್ಲಿ ಶುಕ್ರವಾರದ ಪ್ರಾರ್ಥನೆ ನಂತರ ಕರೆ ನೀಡಿ ಪ್ರೇರೇಪಿಸಬೇಕು ಹಾಗೂ ನಿರಾಕರಿಸಿದ್ದಲ್ಲಿ ಮನವೊಲಿಸಿ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸುವಂತೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾದ ಬಿ.ಎ. ಅಬ್ದುಲ್ ನಾಸೀರ್ ಲಕ್ಕಿಸ್ಟಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಸ್ವಚ್ಛಮೇವ ಜಯತೆ

error: Content is protected !!
Scroll to Top