ತಾರಸಿ ತೋಟ ಮತ್ತು ಕೈತೋಟ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ಮಂಗಳೂರು, ಉಳ್ಳಾಲ ಹಾಗೂ ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ತಾರಸಿ ತೋಟ ಮತ್ತು ಕೈತೋಟ ಮಾಡ ಬಯಸುವ ಆಸಕ್ತ ರೈತರಿಗೆ/ಫಲಾಪೇಕ್ಷಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಬೆಂದೂರು ಕ್ರಾಸ್ ನಲ್ಲಿರುವ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.


ಆಸಕ್ತರು ತಮ್ಮ ಜಮೀನಿನ ಆರ್.ಟಿ.ಸಿ. ವಿವರ ಅಥವಾ ತಮ್ಮ ವಾಸ್ತವ್ಯ ಸ್ಥಳದ ದೃಢೀಕರಣ, ಆಧಾರ್ ವಿವರ ಹಾಗೂ ತಮ್ಮ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತರಬೇತಿಯಲ್ಲಿ ಭಾಗವಹಿಸಲು ದೂರವಾಣಿ ಸಂಖ್ಯೆ: 0824-2423615 ಗೆ ಮಾ.1 ರಂದು ಮಧ್ಯಾಹ್ನದ ಮುಂಚಿತವಾಗಿ ತಮ್ಮ ಭಾಗವಹಿಸುವಿಕೆಯನ್ನು ಖಚಿತಪಡಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿಯನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಬೆಳ್ತಂಗಡಿ : ರಸ್ತೆ ಅಪಘಾತ ➤ ಬೈಕ್ ಸವಾರ ಮೃತ್ಯು..!

error: Content is protected !!
Scroll to Top