ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನಾಳೆಯಿಂದ (ಮಾ. 01) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 36,147 ವಿದ್ಯಾರ್ಥಿಗಳ ನೋಂದಣಿ – News Kadaba

ನಾಳೆಯಿಂದ (ಮಾ. 01) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 36,147 ವಿದ್ಯಾರ್ಥಿಗಳ ನೋಂದಣಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯು ನಾಳೆಯಿಂದ (ಮಾ.01) ಆರಂಭಗೊಳ್ಳಲಿದ್ದು, ದ.ಕ. ಜಿಲ್ಲೆಯಲ್ಲಿ ಒಟ್ಟು 36,147 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಹೆಸರು ನೋಂದಾಯಿಸಿದ್ದಾರೆ ಎಂದು ಡಿಡಿಪಿಯು ಮಾಹಿತಿ ನೀಡಿದ್ದಾರೆ. ಈ ಪೈಕಿ ರೆಗ್ಯುಲರ್ ಆಗಿ 34,125, ಖಾಸಗಿಯಾಗಿ 1,635, ಪುನರಾವರ್ತಿತರಾಗಿ 387 ವಿದ್ಯಾರ್ಥಿಗಳ ಸಹಿತ 36,147 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎನ್ನಲಾಗಿದೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 ಸರಕಾರಿ, 21 ಅನುದಾನಿತ, 17 ಅನುದಾನ ರಹಿತ ಒಟ್ಟು 53 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಇದರಲ್ಲಿ ಮಂಗಳೂರು ತಾಲೂಕಿನ 18, ಉಳ್ಳಾಲದ 4, ಮುಲ್ಕಿ ಮತ್ತು ಸುಳ್ಯ ಸುಳ್ಯದ ತಲಾ 2, ಬಂಟ್ವಾಳ ಮತ್ತು ಬೆಳ್ತಂಗಡಿಯ ತಲಾ 6, ಪುತ್ತೂರು, ಮೂಡುಬಿದಿರೆ ಹಾಗೂ ಕಡಬ ತಾಲೂಕಿನ ತಲಾ 5 ಕೇಂದ್ರಗಳು ಸೇರಿವೆ. ಪರೀಕ್ಷೆಯು ಬೆಳಗ್ಗೆ 10:15ರಿಂದ ಮಧ್ಯಾಹ್ನ ಮಧ್ಯಾಹ್ನ 1:30ರವರೆಗೆ ನಡೆಯಲಿದೆ.

Scroll to Top