ಕನ್ನಡ ನಾಮಫಲಕ ಅಳವಡಿಕೆಗೆ ಮತ್ತೆ 2 ವಾರಗಳ‌ ಅವಧಿ ವಿಸ್ತರಣೆ- ಡಿಸಿಎಂ ಡಿಕೆಶಿವಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 29. ಈಗಾಗಲೇ ಅಂಗಡಿ ಮುಂಗಟ್ಟುಗಳ ಬೋರ್ಡ್ ಗಳಲ್ಲಿ ಶೇ.60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸುವಂತೆ ಒತ್ತಡ ಹೆಚ್ಚಾಗಿದ್ದು, ಅದಕ್ಕಾಗಿ ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ‌ ಕಾಲ ವಿಸ್ತರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ರಾಜ್ಯದ ಎಲ್ಲಾ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಇರಬೇಕು ಎಂಬ ನಿಯಮ ಜಾರಿಯಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ನೀಡಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿತ್ತು. ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳಲ್ಲಿ ಶೇ.60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ‌ ಕಾಲ ವಿಸ್ತರಿಸಲಾಗಿದೆ ಎಂದಿದ್ದಾರೆ. ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿ‌ಹಿಡಿಯುವುದು ಅತಿ ಮುಖ್ಯ. 2 ವಾರಗಳ‌ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ‌ ಎಂದು ನಿರೀಕ್ಷಿಸಿದ್ದೇನೆ ಎಂದೂ ಹೇಳಿದ್ದಾರೆ.

Also Read  ಮಂಗಳೂರು: ನ್ಯಾಯಸಮ್ಮತ ಚುನಾವಣೆ ನಡೆಸಲು ಕೋವಿ    ➤ ಶಸ್ತ್ರಾಸ್ತ್ರ ದಾಸ್ತಾನಿರಿಸಲು ಜಿಲ್ಲಾಧಿಕಾರಿ ಸೂಚನೆ.!                        

error: Content is protected !!
Scroll to Top