(ನ್ಯೂಸ್ ಕಡಬ) newskadaba.com ರಾಜಸ್ಥಾನ, ಫೆ. 29. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಜನರು ಸರ್ಕಾರಿ ಉದ್ಯೋಗಗಳಿಗೆ ಅರ್ಹರಾಗಿರುವುದಿಲ್ಲ ಎಂಬ ರಾಜಸ್ಥಾನ ಸರಕಾರದ ಕಾನೂನನ್ನು ಸುಪ್ರೀಂ ಕೋರ್ಟ್ ಅನುಮೋದಿಸಿದೆ. ಹೀಗಾಗಿ ಇನ್ನುಮುಂದೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಂತಿಲ್ಲ.
ಇದು ರಾಜ್ಯದ 1989 ರ ಕಾನೂನಾಗಿದ್ದು, ಈ ಕಾನೂನಿಗೆ ಸುಪ್ರೀಂ ಕೋರ್ಟ್‌ನ ಅನುಮೋದನೆಯ ಮುದ್ರೆ ಸಿಕ್ಕಿದೆ. ಕಾನೂನನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ, ಈ ನಿಯಮವು ತಾರತಮ್ಯ ರಹಿತವಾಗಿದೆ ಎಂದು ತಿಳಿಸಿದೆ.