ನಕಲಿ ಮ್ಯಾಟ್ರಿಮೋನಿಯಲ್ ಖಾತೆ ಮೂಲಕ 250ಕ್ಕೂ ಅಧಿಕ ಮಹಿಳೆಯರಿಗೆ ವಂಚನೆ – ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 29. ನಕಲಿ ಮ್ಯಾಟ್ರಿಮೋನಿಯಲ್ ಖಾತೆ ಬಳಸಿ ಸುಮಾರು 250ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವನನ್ನು ಬೆಂಗಳೂರು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ರಾಜಸ್ಥಾನ ಮೂಲದ ನರೇಶ್ ಪೂಜಾರಿ ಗೋಸ್ವಾಮಿ(45) ಎಂದು ಗುರುತಿಸಲಾಗಿದೆ. ಈತ ಮ್ಯಾಟ್ರಿಮೋನಿಯಲ್ ಸೈಟ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರೊಫೈಲ್ ಗಳನ್ನು ಸೃಷ್ಟಿಸಿ ಮಹಿಳೆಯರು ಹಾಗೂ ಅವರ ಪೋಷಕರಿಗೆ ಹಣ ನೀಡುವಂತೆ ಆಮಿಷವೊಡ್ಡುತ್ತಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈತನ ವಿರುದ್ಧ ಕೊಯಮತ್ತೂರಿನ ಸಂತ್ರಸ್ತೆಯೊಬ್ಬರು ನೀಡಿದ ದೂರಿನನ್ವಯ ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈತ ವಿಧವೆಯರು ಹಾಗೂ ವಿಚ್ಛೇದಿತ ಮಹಿಳೆಯರನ್ನು ಗುರಿಯಾಗಿಸಿಕೊಂಡು ತಡರಾತ್ರಿ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಲ್ಲದೇ ವಿಶ್ವಾಸಗಳಿಸಿ ಅವರ ಹಣ ನೀಡುವಂತೆ ಆಮಿಷ ಒಡ್ಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಸುಳ್ಯ: ತೆಂಗಿನ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

error: Content is protected !!
Scroll to Top