‘ಕರ್ನಾಟಕ ಚಲನಚಿತ್ರ ಅಕಾಡೆಮಿ’ಯ ಅಧ್ಯಕ್ಷರಾಗಿ ಸಾಧು ಕೋಕಿಲ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 29. ಕರ್ನಾಟಕ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ನಟ ಸಾಧುಕೋಕಿಲರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ನಿಗಮ ಮಂಡಳಿಗೆ 44 ಜನರನ್ನು ಸಿಎಂ ಸಿದ್ದರಾಮಯ್ಯ ನೇಮಿಸಿದ್ದು, ಅದರಲ್ಲಿ ಚಲನಚಿತ್ರ ಅಕಾಡೆಮಿಯೂ ಸೇರಿದೆ. ಸಾಧುಕೋಕಿಲ ಸ್ಯಾಂಡಲ್ ವುಡ್ ನ ಪ್ರತಿಭಾವಂತ ಹಾಸ್ಯ ನಟ ಅಲ್ಲದೇ ಕನ್ನಡದ ಹಲವು ಸಿನಿಮಾಗಳಿಗೆ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ರಾಜ್ಯ ಸರ್ಕಾರ 44 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದೆ. ಕಾಂಗ್ರೆಸ್ ನ 44 ಕಾರ್ಯಕರ್ತರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ.

Also Read  ಹೃದಯಾಘಾತ- ನಿರ್ಮಾಪಕ ಪ್ರಭಾಕರ್ ವಿಧಿವಶ

error: Content is protected !!
Scroll to Top