BMTCಯಲ್ಲಿ 2500 ಕಂಡಕ್ಟರ್ ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 29. ಬಿಎಂಟಿಸಿ ಯಲ್ಲಿ ಖಾಲಿಯಿರುವ ನಿರ್ವಾಹಕರ (ಗ್ರೇಡ್-3 ಮೇಲ್ವಿಚಾರಕರು) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ ಹೊರಡಿಸಿದ್ದು, ಒಟ್ಟು 2,500 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

BMTCಯ ಮಿಕ್ಕುಳಿದ ವೃಂದದಲ್ಲಿ 2286 (RPC) ಹಾಗೂ ಸ್ಥಳೀಯ ವೃಂದದಲ್ಲಿ (ಹೈದರಾಬಾದ್‌ ಕರ್ನಾಟಕ) 214 ಹುದ್ದೆಗಳಿದ್ದು ಒಟ್ಟಾರೆ 825 ಹುದ್ದೆಗಳು ಮೀಸಲಿಡಲಾಗಿದೆ. ಮಾರ್ಚ್ 10ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಏಪ್ರಿಲ್ 10ರಂದು ಮುಕ್ತಾಯವಾಗಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು cetonline.karnataka.gov.in ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ. PUC, CBSC 10+2, ಮೂರು ವರ್ಷದ ಡಿಪ್ಲೋಮಾ ಅಥವಾ ಅದಕ್ಕೆ ಸಮಾನವಾದ ಶೈಕ್ಷಣಿಕ ಅರ್ಹತೆ ಜೊತೆಗೆ ‘ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್’ ಅನ್ನು ಹೊಂದಿದವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

Also Read  ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ಪ್ರವಾಸ

error: Content is protected !!
Scroll to Top