ಇಂದಿನಿಂದ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 01. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಾರ್ಚ್ 1 ಮತ್ತು 2 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಮಾರ್ಚ್ 1 ರಂದು ಶುಕ್ರವಾರ ಸಂಜೆ 5.35 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 6.45ಕ್ಕೆ ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮ, ರಾತ್ರಿ 10 ಗಂಟೆಗೆ ಮಂಗಳೂರು ಸರ್ಕ್ಯೂಟ್ ಹೌಸ್‍ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಾರ್ಚ್ 2ರಂದು ಶನಿವಾರ ಬೆಳಗ್ಗೆ 9 ಗಂಟೆಗೆ ಅಡ್ಯಾರ್ ನಲ್ಲಿ ಪಂಚಾಯತ್‍ ರಾಜ್ ಸದಸ್ಯರ ಕ್ರೀಡಾಕೂಟ ಉದ್ಘಾಟನೆ, 11.30 – ಬಂಟ್ವಾಳ ತಾಲೂಕಿನ ನಾವೂರು ಗ್ರಾಮದಲ್ಲಿ ಮೂಡೂರು ಪಡೂರು ಜೋಡುಕರೆ ಕಂಬಳ ಕಾರ್ಯಕ್ರಮ, ಸಂಜೆ 2.30 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

Also Read  ರಸ್ತೆಯಲ್ಲಿ ಸಿಕ್ಕಿದ ಪರ್ಸನ್ನು ಹಿಂತಿರುಗಿಸಿ ಮಾನವೀಯತೆ ಮೆರೆದ ಗೃಹರಕ್ಷಕ ಸಿಬ್ಬಂದಿ

error: Content is protected !!
Scroll to Top