ಖ್ಯಾತ ಪತ್ರಕರ್ತ, ನಿರೂಪಕ ಮನೋಹರ ಪ್ರಸಾದ್ ವಿಧಿವಶ

(ನ್ಯೂಸ್ ಕಡಬ) newskadaba.com  ಮಂಗಳೂರುಮಾ. 01. ಖ್ಯಾತ ಪತ್ರಕರ್ತ, ನಿರೂಪಕ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್(64) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.

ಮೂಲತಃ ಕಾರ್ಕಳ ತಾಲೂಕಿನ ಕರುವಾಲು ಗ್ರಾಮದವರಾದ ಮನೋಹರ ಪ್ರಸಾದ್ ಅವರು, ಮೊದಲು ನವಭಾರತ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿ, ಬಳಿಕ ಉದಯವಾಣಿಗೆ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಮತ್ತು ಪ್ರಸ್ತುತ ಸಹಾಯಕ ಸಂಪಾದಕರ ಹುದ್ದೆಯವರೆಗೆ ಸತತ 36 ವರ್ಷಗಳ ಸೇವೆ ಸಲ್ಲಿಸಿ ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು. ಕರ್ನಾಟಕ ಕರಾವಳಿ ಇತಿಹಾಸದ ಕುರಿತು 608 ಸಂಶೋಧನ ಲೇಖನಗಳನ್ನು ಬರೆದಿದ್ದ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ, ಸಂದೇಶ ಪ್ರತಿಷ್ಠಾನದ ರಾಜ್ಯ ಪ್ರಶಸ್ತಿ, ಕೆನರಾ ಬ್ಯಾಂಕ್ ಅಮೃತೋತ್ಸವ ಪುರಸ್ಕಾರ ಮೊದಲಾದ ಹಲವು ಗೌರವಗಳಿಗೆ ಭಾಜನರಾಗಿದ್ದಾರೆ.

Also Read  ರೆಂಜಿಲಾಡಿ: ವಿಶ್ವ ಮಾದಕ ವಿರೋಧಿ ದಿನಾಚರಣೆ

error: Content is protected !!
Scroll to Top