ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com  ಉಳ್ಳಾಲ, ಮಾ. 01. ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಪಲ ಸಮೀಪದ ಲಕ್ಷ್ಮಿ ಗುಡ್ಡೆ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೂಲತ: ಕುಂಪಲ ಆಶ್ರಯ ಕಾಲನಿ ನಿವಾಸಿ ಧನರಾಜ್ ಪಿಳ್ಳೆ ಪೂಜಾರಿ(32) ಎಂದು ಗುರುತಿಸಲಾಗಿದೆ. ಆಶ್ರಯ ಕಾಲನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬ ಮನೆ ನವೀಕರಣ ಹಿನ್ನೆಲೆ ಸಮೀಪದ ಲಕ್ಷ್ಮೀಗುಡ್ಡೆಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಅವಿವಾಹಿತನಾಗಿದ್ದ ಧನರಾಜ್ ದೇರಳಕಟ್ಟೆಯ ಯೆನೆಪೋಯ ರಿಕ್ಷಾ ಪಾರ್ಕ್ ನಲ್ಲಿ ಆಟೋ ರಿಕ್ಷಾ ಚಲಾಯಿಸುತ್ತಿದ್ದು, ನಿನ್ನೆ ಸಂಜೆ ಧನರಾಜ್ ತಾಯಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಧನರಾಜ್ ಮನೆಯ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top