ಬೆಳ್ತಂಗಡಿ: ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಮಾ. 01. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬೆಳ್ತಂಗಡಿಯ ಗೇರುಕಟ್ಟೆಯಲ್ಲಿ ನಡೆದಿದೆ.


ಬಂಧಿತ ಆರೋಪಿಗಳನ್ನು ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ ಸತೀಶ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಗೇರುಕಟ್ಟೆ ಸಮೀಪ ಓಡುರೊಟ್ಟು ಎಂಬಲ್ಲಿ ಅನುಮಾನಾಸ್ಪದವಾಗಿ ನಿಂತಿರುವುದನ್ನು ಗಮನಿಸಿದ ಬೆಳ್ತಂಗಡಿ ಪಿ.ಎಸ್.ಐ ಚಂದ್ರಶೇಖರ್ ಹಾಗೂ ತಂಡ ತಡೆದು ವಿಚಾರಣೆ ನಡೆಸಿ ತಪಾಸಣೆ ನಡೆಸಿದಾಗ ಒಟ್ಟು 2.065 ಕೆ.ಜಿ ಗಾಂಜಾ ಪತ್ತೆಯಾಗಿದೆ. ಜೊತೆಗೆ ಗಾಂಜಾ ಸಾಗಾಟಕ್ಕೆ ಉಪಯೋಗಿಸಿದ ಸ್ಕೂಟರ್ ಹಾಗೂ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಆರೋಪಿಗಳ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Also Read  ನಕಲಿ ದಾಖಲೆ ನೀಡಿ ವಂಚನೆ- 3 ಸರ್ಕಾರಿ ನೌಕರರು ಸೇರಿ 48 ಮಂದಿ ಬಂಧನ

error: Content is protected !!
Scroll to Top