ಬೆಳ್ಳಾರೆ: ಬೆಳ್ಳಂಬೆಳಗ್ಗೆ ಎನ್ಐಎ ದಾಳಿ- ಪರಿಶೀಲನೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ. 05. ಎನ್ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ.

ಎನ್ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದ್ದು, ಅಧಿಕಾರಿಗಳನ್ನು ಸಂಪರ್ಕಿಸಿದಾಗ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

 

error: Content is protected !!
Scroll to Top