(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 05. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಎದುರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ 120ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ, ಪ್ರಕರಣದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಆದೇಶ ಹೊರಡಿಸಿದೆ.