ಬೆಳ್ತಂಗಡಿಯ ಮೂವರನ್ನು ಕಾರಿನಲ್ಲಿ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣ – ಪ್ರಮುಖ ಆರೋಪಿ ಸೇರಿದಂತೆ ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ತುಮಕೂರು, ಮಾ.23. ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿದಂತೆ ಒಟ್ಟು ಆರು ಮಂದಿಯನ್ನು ಕೋರಾ ಪೊಲೀಸರು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಎಂಬವರು ಸುಮಾರು ಹತ್ತು ದಿನಗಳ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ತುಮಕೂರಿಗೆ ಹೋಗಿದ್ದರು ಎನ್ನಲಾಗಿದೆ. ಮೃತ ಮೂವರೂ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಎಂದು ಪ್ರಾಥಮಿಕ ವಿಚಾರಣೆ ವೇಳೆ ತಿಳಿದುಬಂದಿದೆ ಎನ್ನಲಾಗಿದೆ.

Also Read  ರೈತರ ಸಾಲಮನ್ನಾ ಪ್ರಸ್ತಾಪ ಸರಕಾರದ ಮುಂದಿಲ್ಲ ➤ ಸಚಿವ ಎಸ್.ಟಿ ಸೋಮಶೇಖರ್

error: Content is protected !!
Scroll to Top