ಬಿಜೆಪಿಗೆ ಘರ್ ವಾಪ್ಸಿ ಆದ ಜನಾರ್ದನ ರೆಡ್ಡಿ – KRPP ಪಕ್ಷ ಬಿಜೆಪಿಯೊಂದಿಗೆ ವಿಲೀನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.25. ಮಾಜಿ ಸಚಿವ ಕರ್ನಾಟಕ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿಯವರು ತನ್ನ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನ ಮಾಡಿ ಪುನಃ ಬಿಜೆಪಿಗೆ ಸೇರ್ಪಡೆಯಾದರು.

ಜನಾರ್ದನ ರೆಡ್ಡಿ ಬಿಜೆಪಿಗೆ ಘರ್ ವಾಪ್ಸಿ ಆಗುವ ಮೂಲಕ ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಆನೆ ಬಲ ಬಂದಂತಾಗಿದೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕೊಪ್ಪಳ, ಬಳ್ಳಾರಿ ಸೇರಿದಂತೆ ಐದಾರು ಜಿಲ್ಲೆಗಳಲ್ಲಿ ಜನಾರ್ದನ ರೆಡ್ಡಿಯವರ ಪಕ್ಷವು ಸ್ಪರ್ಧಿಸಿದ್ದರಿಂದ ಬಿಜೆಪಿಗೆ ಹಲವು ಕ್ಷೇತ್ರಗಳಲ್ಲಿ ಸೋಲಾಗಿತ್ತು. ಇದೀಗ ರೆಡ್ಡಿ ಘರ್ ವಾಪ್ಸಿ ಆಗಿರುವುದರಿಂದ ಲೋಕಸಭಾ ಚುನಾವಣಾ ಲೆಕ್ಕಾಚಾರಗಳು ಅದಲು ಬದಲಾಗಲಿವೆ.

Also Read  ಬೆಳ್ತಂಗಡಿ: ಗ್ರಾಮಗಳಿಗೆ ನುಗ್ಗಿದ ಆನೆಗಳ ಹಿಂಡು

error: Content is protected !!
Scroll to Top