ಕಡಬ: ಅಪರಿಚಿತ ಕಾರು ಢಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮಾ.30. ಅಪರಿಚಿತ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಮರ್ಧಾಳ ಜಂಕ್ಷನ್ ನಲ್ಲಿ ಶನಿವಾರ ರಾತ್ರಿಯ ನಡೆದಿದೆ.

ಮೃತರನ್ನು ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂದು ಗುರುತಿಸಲಾಗಿದೆ. ವಿಠಲ ರೈ ಯವರು ತನ್ನ ಕಾರನ್ನು ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Also Read  VAVADA CASINO Рабочее зеркало на сегодня

 

error: Content is protected !!
Scroll to Top