ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಬಿಸಿ ಗಾಳಿ ಬೀಸುವ ಸಾಧ್ಯತೆ 🔥ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.04. ಎಪ್ರಿಲ್ ಮೊದಲ ಮತ್ತು ಎರಡನೆಯ ವಾರದಲ್ಲಿ ರಾಜ್ಯದಲ್ಲಿ ಬಿಸಿಗಾಳಿಯ ಪರಿಣಾಮ ಇರಲಿದ್ದು, ಮುಂದಿನ ಒಂದು ವಾರಗಳ ಕಾಲ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆಯು ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿಸಿ ಮತ್ತು ಆದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ರಾಜ್ಯದ ಉತ್ತರ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ ಜಿಲ್ಲೆಗಳಲ್ಲಿ ಬಿಸಿಗಾಳಿಯ ಎಚ್ಚರಿಕೆ ನೀಡಿದೆ. ಗರಿಷ್ಠ ತಾಪಮಾನ ಮಾತ್ರ ಅಲ್ಲದೇ ಕನಿಷ್ಠ ತಾಪಮಾನದಲ್ಲೂ ಏರಿಕೆಯಾಗುವ ಸಾಧ್ಯತೆ ಇದೆ. ಬರಗಾಲ, ಜಲಕ್ಷಾಮಕ್ಕೆ ಸಿಲುಕಿ ತತ್ತರಿಸುತ್ತಿರುವ ನಗರಕ್ಕೆ ಇದರಿಂದ ಮತ್ತೊಂದು ಆಘಾತ ಎದುರಾಗಿದೆ. ಮುಂದಿನ 5 ದಿನಗಳಲ್ಲಿ ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಲಿದೆ.

Also Read  ಉಡುಪಿ: ದೇವಸ್ಥಾನದ ಒಳಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

ರಕ್ತದೊತ್ತಡ, ಹೃದಯ ಸಂಬಂಧಿ ಖಾಯಿಲೆ ಇರುವವರು, ಗರ್ಭಿಣಿಯರು, ವೃದ್ಧರು ಮತ್ತು ಮಕ್ಕಳು ರಣ ಬಿಸಿಲಿಗೆ ಮೈ ಒಡ್ಡಬಾರದು. ದೇಹದ ಉಷ್ಣತೆಯು 40 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚು ಏರಿದರೆ ಅತ್ಯಂತ ಗಂಭೀರ ಸಮಸ್ಯೆ ಎದುರಾಗುವ ಸಂಭವ ಇದೆ. ಕೆಲವು ಸಂದರ್ಭಗಳಲ್ಲಿ ಹೀಟ್ ಸ್ಟೋಕ್ ಆಗುವ ಸಾಧ್ಯತೆ ಇದ್ದು, ಇದು ಜೀವಕ್ಕೆ ಕುತ್ತು ತರಲಿದೆ. ಹೀಗಾಗಿ ಮುಂದಿನ ಕೆಲವು ದಿನ ತಾಪಮಾನ ಇಳಿಕೆಯವರೆಗೂ 11 ರಿಂದ 4 ಗಂಟೆಯವರೆಗೂ ಹೆಚ್ಚು ಬಿಸಿಲಿಗೆ ಮೈ ಒಡ್ಡದೆ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Also Read  ಅಲೋಕ್ ಕುಮಾರ್ ವಿರುದ್ದದ ಲಂಚ ಆರೋಪದ ಕೇಸ್ ರದ್ದು ಮಾಡಿದ ಹೈಕೋರ್ಟ್..!

error: Content is protected !!
Scroll to Top