ನೆಲ್ಯಾಡಿ: ಮಂಗಳೂರು – ಬೆಂಗಳೂರು ಪೆಟ್ರೋನೆಟ್ ಪೈಪ್ ಗೆ ಕನ್ನ ಕೊರೆದು ಡೀಸೆಲ್ ಕಳ್ಳತನ – ಕಡಬದ ವ್ಯಕ್ತಿ ಸೇರಿದಂತೆ ಐವರು ಆರೋಪಿಗಳ ಬಂಧನ

crime, arrest, suspected

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.04. ಡೀಸೆಲ್ ಪೈಪ್ ಲೈನ್ ಗೆ ಕನ್ನ ಕೊರೆದು ಲಕ್ಷಾಂತರ ರೂ. ಮೌಲ್ಯದ ಡೀಸೆಲ್ ಕಳ್ಳತನ ಮಾಡಿದ ಘಟನೆಯನ್ನು ಭೇದಿಸಿರುವ ಧರ್ಮಸ್ಥಳ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಕಡಬ ನಿವಾಸಿ ಕಡಬ ತಾಲೂಕಿನ ಕಡಬ ಗ್ರಾಮದ ಕಾರ್ತಿಕ್(28), ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ನೆಲ್ಯಾಡಿ ನಿವಾಸಿ ಜಯ ಸುವರ್ಣ(39), ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ದಿನೇಶ್ ಗೌಡ(40), ಪುದುವೆಟ್ಟು ಗ್ರಾಮದ ಮೋಹನ್ (28), ಹಾಸನ‌ ಜಿಲ್ಲೆಯ ಬೇಲೂರು ತಾಲೂಕಿನ ಹರೆಹಳ್ಳಿಯ ನಿವಾಸಿ ದಿನೇಶ್ (40) ಎಂದು ಗುರುತಿಸಲಾಗಿದೆ. ಆರೋಪಿಗಳು ಮಂಗಳೂರು, ಹಾಸನ ಮತ್ತು ಬೆಂಗಳೂರಿಗೆ ಪೆಟ್ರೋನೆಟ್ ಪೈಪ್ ಮೂಲಕ ಡೀಸೆಲ್ ಪೈಪ್ ಲೈನ್ ಗೆ ಮಾ.16ರ ರಾತ್ರಿಯಿಂದ ಮಾ.19ರ ರಾತ್ರಿಯ ಮಧ್ಯದ ಅವಧಿಯಲ್ಲಿ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಆಲಡ್ಕ ಎಂಬಲ್ಲಿ ಕನ್ನ ಕೊರೆದು 2.5 ಇಂಚು ಹೆಚ್ ಡಿಪಿಇ ಪೈಪ್ ಮೂಲಕ ಅಂದಾಜು 12,000 ಲೀ. ಡಿಸೇಲ್ ನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ. ಘಟನೆಯ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಧರ್ಮಸ್ಥಳ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ‌.

Also Read  ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣ ➤ ತನಿಖೆ ಎರಡು ತಂಡ ರಚನೆ

error: Content is protected !!
Scroll to Top