(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.15. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 13 ನೇ ಬಜೆಟ್ ಮಂಡಿಸುವ ಮೂಲಕ ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದವರ ಪಟ್ಟಿಯಲ್ಲಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಜೊತೆ ಮೊದಲ ಸ್ಥಾನವನ್ನು ಹಂಚಿಕೊಳ್ಳಲಿದ್ದಾರೆ.
ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಇಂದಿಗೂ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರಿನಲ್ಲಿದೆ. ಅವರು ಒಟ್ಟಾರೆ 13 ಬಾರಿ ಬಜೆಟ್ ಮಂಡಿಸಿದ್ದಾರೆ. ಹೆಗಡೆ ಅವರು ದಿವಂಗತ ಎಸ್.ನಿಜಲಿಂಗಪ್ಪ ಮತ್ತು ವೀರೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದ 1966-67 ರಿಂದ 71-72 ರ ಅವಧಿಯಲ್ಲಿ 6 ಬಾರಿ ಬಜೆಟ್ ಮಂಡಿಸಿದ್ದರು. ನಂತರ ತಾವು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ 1983-84 ರಿಂದ 88-89 ರ ಅವಧಿಯಲ್ಲಿ 7 ಬಾರಿ ಆಯವ್ಯಯ ಮಂಡಿಸಿದ್ದಾರೆ. ಹೀಗೆ 13 ಬಾರಿ ಬಜೆಟ್ ಮಂಡಿಸುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. ಈಗ ಸಿದ್ದರಾಮಯ್ಯ ಅವರು ಕೂಡ 13 ಬಾರಿ ಬಜೆಟ್ ಮಂಡಿಸುವ ಮೂಲಕ ದಿ.ರಾಮಕೃಷ್ಣ ಹೆಗಡೆ ಅವರ ಸ್ಥಾನದಲ್ಲಿ ನಿಂತುಕೊಳ್ಳಲಿದ್ದಾರೆ. ನಂತರದ ಸ್ಥಾನ ಸಿದ್ದರಾಮಯ್ಯ ಅವರದು. ಈ ಅವಧಿಯಲ್ಲಿ 5 ಬಾರಿ ಸೇರಿ ಹೆಚ್.ಡಿ. ದೇವೇಗೌಡ, ಜೆ.ಹೆಚ್.ಪಟೇಲ್ ಹಾಗೂ ಧರಂಸಿಂಗ್ ಅವಧಿಯಲ್ಲಿ 7 ಬಾರಿ ಬಜೆಟ್ ಮಂಡಿಸಿದ್ದಾರೆ. ಮೂರನೇ ಸ್ಥಾನದಲ್ಲಿ ಎಸ್.ಎಂ. ಕೃಷ್ಣ ಅವರಿದ್ದು, ಒಟ್ಟು 5 ಬಾರಿ ಬಜೆಟ್ ಮಂಡಿಸಿದ್ದಾರೆ.