ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸುಬ್ರಹ್ಮಣ್ಯ: ಸಿಡಿಲು ಬಡಿದು ನವ ವಿವಾಹಿತ ಮೃತ್ಯು – News Kadaba

ಸುಬ್ರಹ್ಮಣ್ಯ: ಸಿಡಿಲು ಬಡಿದು ನವ ವಿವಾಹಿತ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.03. ಸಿಡಿಲು ಬಡಿದು ನವ ವಿವಾಹಿತರೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

ಮೃತರನ್ನು ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ನಿವಾಸಿ ಸೋಮಸುಂದರ್(33) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದ್ದು, ಈ ವೇಳೆ ಮನೆಯಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದ ಸೋಮಸುಂದರ್ ಅವರಿಗೆ ಸಿಡಿಲು ಬಡಿದಿದೆ ಎನ್ನಲಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಳೆದ 10 ದಿನಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಸೋಮ‌ಸುಂದರ್, ಪತ್ನಿ, ತಾಯಿ, ತಂಗಿಯನ್ನು ಅಗಲಿದ್ದಾರೆ.

Scroll to Top