ಆಂಬ್ಯುಲೆನ್ಸ್ ಹಾಗೂ ಆಲ್ಟೋ 800 ಕಾರಿನ ನಡುವೆ ಭೀಕರ ಅಪಘಾತ – ಮೂವರು ದಾರುಣ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.07. ರೋಗಿಯನ್ನು ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಾರುತಿ‌ ಆಲ್ಟೋ 800 ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ತಲಪಾಡಿ ಸಮೀಪದ ಮಂಜೇಶ್ವರದಲ್ಲಿ ನಡೆದಿದೆ.

ಮೃತರನ್ನು ಕೇರಳದ ತ್ರಿಶೂರು ಜಿಲ್ಲೆಯ ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನನ್ ಎಂದು ಗುರುತಿಸಲಾಗಿದೆ.‌ ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮಂಜೇಶ್ವರ ಸಮೀಪ ವಿರುದ್ಧ ರಸ್ತೆಯಲ್ಲಿ ಸಂಚರಿಸಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಆ್ಯಂಬುಲೆನ್ಸ್ ರಸ್ತೆಯಲ್ಲಿ ಮಗುಚಿ ಬಿದ್ದಿದೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿಯು ಗಾಯಗೊಂಡಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Also Read  ಬೆಳ್ತಂಗಡಿ: ಊರಿನವರ ಸಹಕಾರದಿಂದ ಮೃತ್ಯುಂಜಯ ನದಿಗೆ ಕಾಲುಸಂಕ ನಿರ್ಮಾಣ

error: Content is protected !!
Scroll to Top