ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ ಬಾಲಕ – ಸಿಸಿ ಕ್ಯಾಮರ ಆಧರಿಸಿ ಬಾಲಕ ಪೊಲೀಸ್ ವಶಕ್ಕೆ

Crime

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.8 ನಗರದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ 17 ವರ್ಷ ಪ್ರಾಯದ ಬಾಲಕನೊಬ್ಬನನ್ನು ಬಂದರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಪತ್ತೆಯಾಗಿದ್ದು, ಸಿಸಿ ಕ್ಯಾಮರಾ ಆಧರಿಸಿ ಪರಿಶೀಲನೆ ನಡೆಸಿದಾಗ ಬಾಲಕನೊಬ್ಬ ಮೊಬೈಲ್ ಇಟ್ಟಿರುವುದು ಕಂಡು ಬಂದಿದೆ. ಶೌಚಾಲಯದಲ್ಲಿ ಯಾರೂ ಇಲ್ಲದ ವೇಳೆ ಮೊಬೈಲ್ ರಿಂಗಿಣಿಸಿದ್ದು, ತಕ್ಷಣ ಭದ್ರತಾ ಸಿಬ್ಬಂದಿಯು ಶೌಚಾಲಯವನ್ನು ಪರಿಶಿಲಿಸಿದಾಗ ಮೊಬೈಲ್ ಪತ್ತೆಯಾಗಿತ್ತು ಎನ್ನಲಾಗಿದೆ. ಬಾಲಕ ರೋಗಿಯ ಸೋಗಿನಲ್ಲಿ ವೈದ್ಯಕೀಯ ಕಾಲೇಜಿನ ಒಳಗೆ ಬಂದು ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ ಎನ್ನಲಾಗಿದ್ದು, ಪೊಲೀಸರು ವಿಚಾರಣೆ ನಡೆಸಿ ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿರುವುದಾಗಿ ತಿಳಿದು ಬಂದಿದೆ.

Also Read  ಕೆ.ಸಿ.ಎಫ್ ಖತ್ತರ್ ರಾಷ್ಟ್ರೀಯ ಸಮಿತಿ ವತಿಯಿಂದ  ಪ್ರತಿಭೋತ್ಸವ 2K23

error: Content is protected !!
Scroll to Top