ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ‌ ಕ್ಷಣಗಣನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.09. ರಾಜ್ಯದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೌಲ್ಯಮಾಪನ ಮುಗಿದಿದ್ದು, ಇಂದು (ಮೇ.09) ಬೆಳಿಗ್ಗೆ 10.30 ಗಂಟೆಗೆ ಫಲಿತಾಂಶ ಪ್ರಕಟಗೊಳ್ಳಲಿದೆ.

ಇಂದು ಬೆಳಿಗ್ಗೆ 10.30 ಗಂಟೆಗೆ https://karresults.nic.in ಜಾಲತಾಣದಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!
Scroll to Top