ಗುಂಡ್ಯ: ಇನ್ನೋವಾ ಹಾಗೂ ಕಂಟೇನರ್ ನಡುವೆ ಅಪಘಾತ, ಇಬ್ಬರ ದುರ್ಮರಣ – ನಾಲ್ವರು ಗಂಭೀರ

Accident

(ನ್ಯೂಸ್ ಕಡಬ) newskadaba.com ಕಡಬ, ಮೇ.21. ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇನ್ನೋವಾದಲ್ಲಿದ್ದ ತಾಯಿ ಮತ್ತು ಮಗ ದಾರುಣವಾಗಿ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನ ಕೆಂಪುಹೊಳೆ ಎಂಬಲ್ಲಿ ನಡೆದಿದೆ.

ಮೃತರನ್ನು ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದ ರೇಂಗೇಲು ನಿವಾಸಿ ಶಫೀಕ್ ಎಂಬವರ ಪತ್ನಿ ಸಫಿಯಾ ಹಾಗೂ ಪುತ್ರ ಶಬೀರ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ನಡೆದ ಮದುವೆ ಕಾರ್ಯಕ್ರಮವನ್ನು ಮುಗಿಸಿ ಹಿಂತಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಕಾರು ಶಿರಾಡಿ ಘಾಟ್ ನ ಕೆಂಪುಹೊಳೆ ಸಮೀಪ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೈನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.

error: Content is protected !!
Scroll to Top