ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪೊಲೀಸರಿಗೆ ಧಮ್ಕಿ ಹಾಕಿದ ಆರೋಪ?ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನಿವಾಸದಲ್ಲಿ ಹೈಡ್ರಾಮಾ – News Kadaba

ಪೊಲೀಸರಿಗೆ ಧಮ್ಕಿ ಹಾಕಿದ ಆರೋಪ?ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನಿವಾಸದಲ್ಲಿ ಹೈಡ್ರಾಮಾ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.22. ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ ಹಾಕಿದ ಆರೋಪದಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಬಂಧನಕ್ಕೆ ಪೊಲೀಸರು ಮುಂದಾಗಿದ್ದರೆ, ಇನ್ನೊಂದೆಡೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಪೂಂಜಾ ನಿವಾಸದಲ್ಲಿ ಭಾರೀ ಹೈಡ್ರಾಮಾ ನಡೆಯುತ್ತಿದೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಲು ಬೆಳ್ತಂಗಡಿ ಪೊಲೀಸರು ಸಿದ್ಧತೆ ನಡೆಸಿದ್ದು, ಗರ್ಡಾಡಿಯ ಅವರ ಮನೆಯ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬುಧವಾರದಂದು ಪೊಲೀಸರು ಗರ್ಡಾಡಿಯಲ್ಲಿರುವ ಶಾಸಕ ಹರೀಶ್ ಪೂಂಜ ಅವರ ಮನೆಗೆ ಆಗಮಿಸಿದ್ದಾರೆ. ಈ ವೇಳೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜಮಾಯಿಸಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಹರೀಶ್ ಪೂಂಜಾರನ್ನು ಬಂಧಿಸಿದರೆ ನಾಳೆ (ಮೇ.23) ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ಸಂಸದ ನಳಿನ್ ಕುಮಾರ್ ಕಟೀಲ್ ಕರೆ ನೀಡಿದ್ದಾರೆ.

Scroll to Top